ಭಾನುವಾರ, ಜೂನ್ 28, 2009

ನಿಶಕ್ತ ಕಾಲುಗಳು

ಚಿಕ್ಕವನಿದ್ದಾಗಲೇ ಮೇಲೆದ್ದ. ಮೇಲದ್ದಾಗಲೇ ಬಿದ್ದ
ಮಕ್ಕಳೇ ದೇವರೆಂದ, ಮಕ್ಕಳಿಗೆ ಇವನೇ ದೆವ್ವೆಂದರು.
ಗೆದ್ದಷ್ಟೇ ಸೋತ. ಸೋತಷ್ಟೇ ಮತ್ತೆ ಚಿಗಿತ.
ಚಿಗಿಯುವಾಗಲೂ, ನೆಗೆಯುವಾಗಲೂ ತಾನೇ ತಾನಾದ.
ಕರಿ ಬಿಳಿ ತೊಗಲಿನ ಮಧ್ಯೆ ಕುಣಿದ, ಕುಪ್ಪಳಿಸಿದಎಲುಬುಗಳು
ಮುರಿಯವಂತೆ ಮೈ ಮಣಿಸಿದ ಕಾಲ್ ಕುಣಿಸಿದ,
ದನಿ ಎತ್ತರಿಸಿ, ತಗ್ಗಿಸಿದ ಪ್ರತಿ ಏರಿಳಿತದಲ್ಲೂ
ನೋವು-ನಲಿವು ನಗಿಸಿದ ಪಾಪ್ ಎಂದು ಮೂಗು ಮುರಿಯೋರೋಮೂಗ್
ಮೇಲೆ ಬೆರಳಿಟ್ಟರು, ಕಣ್ಣೀರಿಟ್ಟರು
ಸರ ಸರ ಸರಿದಾಡುವ, ಹರಿದಾಡುವ ಕಾಲುಗಳಿಗೆ ಕಣ್, ಮನ ಸೋತರು.
ಈಗ ಕಾಲುಗಳೇ ನಿತ್ರಾಣ, ನಿಶಕ್ತ ಹಾಡುವ ರಾಗ, ನಿರಾಗ,
ಕೇಳುವಗಡಿ-ಭಾಷೆ ಬೇಧಿಸಿ, ರಾಗ-ದ್ವೇಷ ಸರಿಸಿ ನಾದ ಹರಿಸಿದ.
ಕೊನೆಗೇ ತಾನೇ ನಿನಾದನಾದ.
ನನ್ನ ಕತ್ತರಿಸಿದರೂ ಹರಿಯೋದುಕೆಂಪ ರಕ್ತ, ಕರಿಯಲ್ಲ
ಎನ್ನುತ್ತಲೇ ಬಿಳಿ ಚರ್ಮಕ್ಕೆ ಮನಸೋತ ಬಣ್ಣ ಬಲಾಯಿಸಿದ
ಬಣ್ಣವೇನೋ ಬದಲಾಯಿತು. ಮನಸ್ಸು?

Featured Post

Is Signal more secure than Whatsapp?- ವಾಟ್ಸ್‌ಆ್ಯಪ್‌ಗಿಂತ ಸಿಗ್ನಲ್‌ ಹೇಗೆ ಬೆಸ್ಟು?

- ಮಲ್ಲಿಕಾರ್ಜುನ ತಿಪ್ಪಾರ ಜಗತ್ತಿನ ನಂಬರ್ ‌ 1 ಶ್ರೀಮಂತ , ಟೆಸ್ಲಾ ಕಂಪನಿಯ ಮಾಲೀಕ ಎಲಾನ್ ‌ ಮಸ್ಕ್ ‌ ಆ ಒಂದು ಟ್ವೀಟ್ ‌ ಮಾಡ ­ ದಿದ್ದರೆ ಈ ಜಗತ್ತು ‘ ಸಿಗ್ನಲ್ ‌...