ಚಿಕ್ಕವನಿದ್ದಾಗಲೇ ಮೇಲೆದ್ದ. ಮೇಲದ್ದಾಗಲೇ ಬಿದ್ದಮಕ್ಕಳೇ ದೇವರೆಂದ, ಮಕ್ಕಳಿಗೆ ಇವನೇ ದೆವ್ವೆಂದರು.
ಗೆದ್ದಷ್ಟೇ ಸೋತ. ಸೋತಷ್ಟೇ ಮತ್ತೆ ಚಿಗಿತ.
ಚಿಗಿಯುವಾಗಲೂ, ನೆಗೆಯುವಾಗಲೂ ತಾನೇ ತಾನಾದ.
ಕರಿ ಬಿಳಿ ತೊಗಲಿನ ಮಧ್ಯೆ ಕುಣಿದ, ಕುಪ್ಪಳಿಸಿದಎಲುಬುಗಳು
ಮುರಿಯವಂತೆ ಮೈ ಮಣಿಸಿದ ಕಾಲ್ ಕುಣಿಸಿದ,
ದನಿ ಎತ್ತರಿಸಿ, ತಗ್ಗಿಸಿದ ಪ್ರತಿ ಏರಿಳಿತದಲ್ಲೂ
ನೋವು-ನಲಿವು ನಗಿಸಿದ ಪಾಪ್ ಎಂದು ಮೂಗು ಮುರಿಯೋರೋಮೂಗ್
ಮೇಲೆ ಬೆರಳಿಟ್ಟರು, ಕಣ್ಣೀರಿಟ್ಟರು
ಸರ ಸರ ಸರಿದಾಡುವ, ಹರಿದಾಡುವ ಕಾಲುಗಳಿಗೆ ಕಣ್, ಮನ ಸೋತರು.
ಈಗ ಕಾಲುಗಳೇ ನಿತ್ರಾಣ, ನಿಶಕ್ತ ಹಾಡುವ ರಾಗ, ನಿರಾಗ,
ಕೇಳುವಗಡಿ-ಭಾಷೆ ಬೇಧಿಸಿ, ರಾಗ-ದ್ವೇಷ ಸರಿಸಿ ನಾದ ಹರಿಸಿದ.
ಕೊನೆಗೇ ತಾನೇ ನಿನಾದನಾದ.
ನನ್ನ ಕತ್ತರಿಸಿದರೂ ಹರಿಯೋದುಕೆಂಪ ರಕ್ತ, ಕರಿಯಲ್ಲ
ಎನ್ನುತ್ತಲೇ ಬಿಳಿ ಚರ್ಮಕ್ಕೆ ಮನಸೋತ ಬಣ್ಣ ಬಲಾಯಿಸಿದ
ಬಣ್ಣವೇನೋ ಬದಲಾಯಿತು. ಮನಸ್ಸು?
2 ಕಾಮೆಂಟ್ಗಳು:
tumba chennagi barediddira sir....
ಆದರೂ ಶ್ರಮಜೀವಿ....
ಕಾಮೆಂಟ್ ಪೋಸ್ಟ್ ಮಾಡಿ