ಪ್ರಾದೇಶಿಕ ಪಕ್ಷ ಗಳು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬಹುದು ಎಂಬುದನ್ನು ದ್ರಾವಿಡ್ ಮುನ್ನೇತ್ರ ಕಳಗಂ(ಡಿಎಂಕೆ) ತೋರಿಸಿಕೊಟ್ಟಿತ್ತು. ಪ್ರಾದೇಶಿಕ ಪಕ್ಷ ಗಳ ಪೈಕಿ ತುಂಬ ಹಳೆಯದಾದ ಡಿಎಂಕೆ, ನಮ್ಮ ರಾಜ್ಯದ ನೆರೆಯ ತಮಿಳುನಾಡು ಮತ್ತು ಪುದುಚೆರಿಯಲ್ಲಿ ತನ್ನ ಪ್ರಾಬಲ್ಯ ಹೊಂದಿದೆ. ತಮಿಳುನಾಡಿನಲ್ಲಿ ಸದ್ಯ ಪ್ರತಿಪಕ್ಷ ಸ್ಥಾನದಲ್ಲಿದೆ. ಈ ಪಕ್ಷ ದ ಜನಪ್ರಿಯ ನಾಯಕರೆಂದರೆ, ಸಿ.ಎನ್.ಅಣ್ಣಾದೊರೈ, ಎಂ. ಕರುಣಾನಿಧಿ, ಎಂಜಿಆರ್(ಪಕ್ಷ ತೊರೆದು ತಮ್ಮದೇ ಆದ ಎಐಡಿಎಂಕೆ ಸ್ಥಾಪಿಸಿದರು), ಎಂ.ಕೆ.ಸ್ಟಾಲಿನ್, ಕನ್ನಿಮೋಳಿ... ಮುಂತಾದವರು. ಕರುಣಾನಿಧಿ ಅವರು ಐದು ಬಾರಿಗೆ ತಮಿಳುನಾಡು ಮುಖ್ಯಂತ್ರಿಯಾಗಿದ್ದರು. ಅಲ್ಲದೆ, 1969ರಿಂದ ಅವರು ತಮ್ಮ ಸಾವಿನ ದಿನವರೆಗೂ ಅಂದರೆ 2018ರ ಅಗಸ್ಟ್ 7ರವರೆಗೂ ಡಿಎಂಕೆಯ ನೇತೃತ್ವ ವಹಿಸಿದ್ದರು. ಕಾಂಗ್ರೆಸ್ ಹೊರತುಪಡಿಸಿ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷ ವೊಂದು ಸ್ವಂತ ಸರಕಾರ ರಚಿಸಬಹುದು ಎಂಬುದನ್ನು ಡಿಎಂಕೆಸಾಧಿಸಿ ತೋರಿಸಿತು. ಇದು ಮುಂದೆ ಬಹಳಷ್ಟು ಪ್ರಾದೇಶಿಕ ಪಕ್ಷ ಗಳಿಗೆ ದಾರಿ ಮಾಡಿಕೊಟ್ಟಿತ್ತು. ಡಿಎಂಕೆಯ ಮೂಲ ಜಸ್ಟೀಸ್ ಪಾರ್ಟಿಯಲ್ಲಿದೆ. ಕಾಂಗ್ರೆಸ್‌ನಲ್ಲಿದ್ದ ಪೆರಿಯಾರ್ ಇ.ವಿ.ರಾಮಸ್ವಾಮಿ ಅವರು ಜಸ್ಟೀಸ್ ಪಾರ್ಟಿಯನ್ನು 1935ರಲ್ಲಿ ಸೇರಿದರು. ಬಳಿಕ ದ್ರಾವಿಡರ್ ಕಳಗಂ ಸ್ಥಾಪಿಸಿ, ದ್ರಾವಿಡರಿಗೆ ಪ್ರತ್ಯೇಕ ರಾಷ್ಟ್ರ ಬೇಡಿಕೆ ಹಾಗೂ ಹಿಂದಿ ವಿರೋಧಿ ಪ್ರಮುಖ ಅದರ ಪ್ರಮುಖ ನೀತಿಗಳಾಗಿದ್ದವು. ಆದರೆ, ನಂತರದ ದಿನಗಳಲ್ಲಿ ಪ್ರತ್ಯೇಕ ರಾಷ್ಟ್ರ ಹೋರಾಟ ಕೈಬಿಡಲಾಯಿತು. ಈ ಸೈದ್ಧಾಂತಿಕ ವಿಚಾರಧಾರೆಯು ಡಿಎಂಕೆಗೂ ಹರಿದು ಬಂತು. ಆಗ ರಾಮಸ್ವಾಮಿ ಅವರಿಗೆ ಹೆಗಲು ನೀಡಿದ್ದ ಅಣ್ಣಾದೊರೈ ಅವರು ದ್ರಾವಿಡರ್ ಕಳಗಂನಿಂದ ಹೊರಬಂದು ಡಿಎಂಕೆ ಸ್ಥಾಪಿಸಿದರು. ನಂತರ ಅಣ್ಣಾದೊರೈ ಜತೆಯಾಗಿ ಹೆಜ್ಜೆ ಹಾಕಿದವರು ಕರುಣಾನಿಧಿ ಅವರು. ಸದ್ಯ ಡಿಎಂಕೆ ನಾಯಕತ್ವವನ್ನು ಅವರ ಪುತ್ರ ಎಂ.ಕೆ. ಸ್ಟಾಲಿನ್ ವಹಿಸಿದ್ದಾರೆ. ಪ್ರಾದೇಶಿಕತೆ, ಹಿಂದಿ ಹೇರಿಕೆ ವಿರೋಧಿ ನೀತಿ, ಸಾಮಾಜಿಕ ಪ್ರಜಾಪ್ರಭುತ್ವ ನೀತಿಯನ್ನು ಡಿಎಂಕೆ ಅಳವಡಿಸಿಕೊಂಡಿದೆ. ಜನಪ್ರಿಯ ನಾಯಕ ಎಂಜಿಆರ್ ಕೂಡ ಡಿಎಂಕೆ ಭಾರಿ ಬಲ ತುಂಬಿದ್ದರು. ಆದರೆ, ಅವರು ಭಿನ್ನಾಭಿಪ್ರಾಯದಿಂದಾಗಿ ಡಿಎಂಕೆಯಿಂದ ಹೊರ ನಡೆದು, ತಮ್ಮದೇ ಆದ ಎಐಡಿಎಂಕೆ ಸ್ಥಾಪಿಸಿದರು. ಮುಂದೆ ತಮಿಳುನಾಡಲ್ಲಿ ಡಿಎಂಕೆ ಮತ್ತು ಎಐಡಿಎಂಕೆ ನಡುವಿನ ಹೋರಾಟವೇ ರಾಜಕಾರಣವಾಯಿತು. ಸದ್ಯ ಡಿಎಂಕೆ ಯುಪಿಎ ಭಾಗವಾಗಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
-
ಮೂರೂ ಮಾದರಿಯ ಕ್ರಿಕೆಟ್ನಲ್ಲಿಭಾರತೀಯ ಕ್ರಿಕೆಟ್ ತಂಡದ ಕಾಯಂ ಸದಸ್ಯರಾಗಿರುವ ರವೀಂದ್ರ ಜಡೇಜಾ ಅವರೀಗ ಐಪಿಎಲ್ನಲ್ಲಿಸಿಎಸ್ಕೆ ತಂಡದ ನಾಯಕ. - ಮಲ್ಲಿಕಾರ್ಜುನ ತಿಪ್ಪಾ...
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
-
ಚೆನ್ನೈನಲ್ಲಿ ಇನ್ನೂ ಮುಂಗಾರು ಪ್ರಾರಂಭವಾಗಿಲ್ಲ. ಆದರೆ ಯೋಗರಾಜ್ ಭಟ್ಟರ "ಮುಂಗಾರು ಮಳೆ" ಭರ್ಜರಿಯಾಗಿ ಸುರಿಯುತ್ತಿದೆ.. ಹಾಗೇ ಸುಮ್ಮನೆ..! ಅರೆ ಏನು ಇದು.....
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ