ದೇಶದ ಪ್ರಬಲ ಪ್ರಾದೇಶಿಕ ಪಕ್ಷ ಗಳ ಪೈಕಿ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಕೂಡ ಒಂದು. ಸದ್ಯ ತಮಿಳುನಾಡುರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಎಐಎಡಿಎಂಕೆ, ಪುದುಚೆರಿಯಲ್ಲೂ ತನ್ನ ಪ್ರಭಾವ ಹೊಂದಿದೆ. ತಮಿಳುನಾಡಿನ ಜನಪ್ರಿಯ ನಟ ಮತ್ತು ರಾಜಕಾರಣಿ ಎಂ.ಜಿ.ರಾಮಚಂದ್ರನ್ ಅವರು ಈ ಪಕ್ಷ ವನ್ನು ಸ್ಥಾಪಿಸಿದರು. ಡಿಎಂಕೆಯಿಂದಲೇ ರಾಜಕಾರಣ ಆರಂಭಿಸಿದ್ದ ಎಂಜಿಆರ್, 1972ರಲ್ಲಿ ಅದರಿಂದ ಹೊರ ಬಂದು ಎಐಎಡಿಎಂಕೆ ಸ್ಥಾಪಿಸಿದರು. 1997ರ ತಮಿಳುನಾಡು ವಿಧಾಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಅಧಿಕಾರಕ್ಕೆ ಬಂತು. ಎಂಜಿಆರ್ ಮುಖ್ಯಮಂತ್ರಿಯಾದರು. 1987ರವರೆಗೂ ಅಂದರೆ, ತಮ್ಮ ಸಾವಿನವರೆಗೂ ಎಂಜಿಆರ್ ಮುಖ್ಯಮಂತ್ರಿಯಾಗಿದ್ದರು. ಅವರ ನಿಧನ ಬಳಿಕ ನಾಯಕತ್ವಕ್ಕೆ ಸಂಬಂಧಿಸಿದಂತೆ ಎಂಜಿಆರ್ ಪತ್ನಿ ಜಾನಕಿ ರಾಮಚಂದ್ರನ್ ಮತ್ತು ಜಯಲಲಿತಾ ಮಧ್ಯೆ ಸಂಘರ್ಷವೇ ನಡೆಯಿತು. ಜಾನಕಿ ರಾಮಚಂದ್ರನ್ ಅವರಿಗೆ 98 ಶಾಸಕರು ಬೆಂಬಲ ನೀಡಿದ್ದರಿಂದ ಕೇವಲ 24 ದಿನಗಳ ಮಟ್ಟಿಗೆ ಅವರು ಸಿಎಂ ಆದರು. ವಿಧಾನಸಭೆ ಅಮಾನತ್ತಿನಲ್ಲಿಡಲಾಯಿತು. ಬಳಿಕ ನಡೆದ ಚುನಾವಣೆಯಲ್ಲಿ ಜಾನಕಿ ಹಾಗೂ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಎರಡೂ ಗುಂಪುಗಳು ಹೀನಾಯವಾಗಿ ಸೋತವು. ಡಿಎಂಕೆ ಅಧಿಕಾರಕ್ಕೆ ಬಂತು. ಈ ಸೋಲಿನ ಬಳಿಕ ಜಯಲಲಿತಾ ನೇತೃತ್ವದಲ್ಲಿ ಎಐಎಡಿಎಂಕೆ ಮತ್ತೆ ಒಂದಾಯಿತು. 1991ರ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೂಡಿ ವಿಧಾನಸಭೆಗೆ ಭರ್ಜರಿಯಾಗಿ ಎಂಟ್ರಿ ಕೊಟ್ಟ ಜಯಲಲಿತಾ ಮುಖ್ಯಮಂತ್ರಿಯಾದರು. ಇಲ್ಲಿಂದ ಜಯಾ ರಾಜಕಾರಣ ಪರ್ವ ಶುರುವಾಯಿತು. ಮುಂದೆ 1998ರ ಲೋಕಸಭೆ ಚುನಾವಣೆ ಹೊತ್ತಿಗೆ ಜಯಲಲಿತಾ ಬಿಜೆಪಿ, ಎಂಡಿಎಂಕೆ ಜತೆ ಮೈತ್ರಿಕೂಟ ರಚಿಸಿಕೊಂಡರು. ಕೇಂದ್ರದಲ್ಲಿ ವಾಜಪೇಯಿ ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದು ಸರಕಾರ ಪತನಕ್ಕೆ ಕಾರಣರಾದರು. ಜಯಲಲಿತಾ ಅವರು 1991- 1996, 2001, 2002- 2006, 2011- 2014, 2015ಧಿ-2016 ಅವಧಿಯಲ್ಲಿ ಮುಖ್ಯಯಂತ್ರಿಯಾಗಿದ್ದರು. ಎಂಜಿಆರ್ ಬಳಿಕ ಪಕ್ಷ ಕ್ಕೆ ಜಯಲಲಿತಾ ಅವರು ಗಟ್ಟಿ ನಾಯಕತ್ವ ಒದಗಿಸಿದ್ದರು. ಆದರೆ, ಜಯಾ ಸಾವಿನ ಬಳಿಕ ಮತ್ತೆ ನಾಯಕತ್ವದ ಕಿತ್ತಾಟ ಶುರವಾಗಿದೆ. ಎಂಜಿಆರ್ ಮತ್ತು ಜಯಲಲಿತಾ ಇಬ್ಬರೂ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಪ್ರಸಿದ್ಧ ಪಡೆದರು. ಪ್ರಸಕ್ತ ಲೋಕಸಭೆ ಚುನಾವಣೆಯನ್ನು ಎಐಎಡಿಎಂಕೆಯು ಬಿಜೆಪಿ ಜತೆಗೂಡಿ ಎದುರಿಸುತ್ತಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
-
ಮೂರೂ ಮಾದರಿಯ ಕ್ರಿಕೆಟ್ನಲ್ಲಿಭಾರತೀಯ ಕ್ರಿಕೆಟ್ ತಂಡದ ಕಾಯಂ ಸದಸ್ಯರಾಗಿರುವ ರವೀಂದ್ರ ಜಡೇಜಾ ಅವರೀಗ ಐಪಿಎಲ್ನಲ್ಲಿಸಿಎಸ್ಕೆ ತಂಡದ ನಾಯಕ. - ಮಲ್ಲಿಕಾರ್ಜುನ ತಿಪ್ಪಾ...
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
-
ಚೆನ್ನೈನಲ್ಲಿ ಇನ್ನೂ ಮುಂಗಾರು ಪ್ರಾರಂಭವಾಗಿಲ್ಲ. ಆದರೆ ಯೋಗರಾಜ್ ಭಟ್ಟರ "ಮುಂಗಾರು ಮಳೆ" ಭರ್ಜರಿಯಾಗಿ ಸುರಿಯುತ್ತಿದೆ.. ಹಾಗೇ ಸುಮ್ಮನೆ..! ಅರೆ ಏನು ಇದು.....
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ