ಪ್ರಾದೇಶಿಕ ಪಕ್ಷ ಗಳು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬಹುದು ಎಂಬುದನ್ನು ದ್ರಾವಿಡ್ ಮುನ್ನೇತ್ರ ಕಳಗಂ(ಡಿಎಂಕೆ) ತೋರಿಸಿಕೊಟ್ಟಿತ್ತು. ಪ್ರಾದೇಶಿಕ ಪಕ್ಷ ಗಳ ಪೈಕಿ ತುಂಬ ಹಳೆಯದಾದ ಡಿಎಂಕೆ, ನಮ್ಮ ರಾಜ್ಯದ ನೆರೆಯ ತಮಿಳುನಾಡು ಮತ್ತು ಪುದುಚೆರಿಯಲ್ಲಿ ತನ್ನ ಪ್ರಾಬಲ್ಯ ಹೊಂದಿದೆ. ತಮಿಳುನಾಡಿನಲ್ಲಿ ಸದ್ಯ ಪ್ರತಿಪಕ್ಷ ಸ್ಥಾನದಲ್ಲಿದೆ. ಈ ಪಕ್ಷ ದ ಜನಪ್ರಿಯ ನಾಯಕರೆಂದರೆ, ಸಿ.ಎನ್.ಅಣ್ಣಾದೊರೈ, ಎಂ. ಕರುಣಾನಿಧಿ, ಎಂಜಿಆರ್(ಪಕ್ಷ ತೊರೆದು ತಮ್ಮದೇ ಆದ ಎಐಡಿಎಂಕೆ ಸ್ಥಾಪಿಸಿದರು), ಎಂ.ಕೆ.ಸ್ಟಾಲಿನ್, ಕನ್ನಿಮೋಳಿ... ಮುಂತಾದವರು. ಕರುಣಾನಿಧಿ ಅವರು ಐದು ಬಾರಿಗೆ ತಮಿಳುನಾಡು ಮುಖ್ಯಂತ್ರಿಯಾಗಿದ್ದರು. ಅಲ್ಲದೆ, 1969ರಿಂದ ಅವರು ತಮ್ಮ ಸಾವಿನ ದಿನವರೆಗೂ ಅಂದರೆ 2018ರ ಅಗಸ್ಟ್ 7ರವರೆಗೂ ಡಿಎಂಕೆಯ ನೇತೃತ್ವ ವಹಿಸಿದ್ದರು. ಕಾಂಗ್ರೆಸ್ ಹೊರತುಪಡಿಸಿ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷ ವೊಂದು ಸ್ವಂತ ಸರಕಾರ ರಚಿಸಬಹುದು ಎಂಬುದನ್ನು ಡಿಎಂಕೆಸಾಧಿಸಿ ತೋರಿಸಿತು. ಇದು ಮುಂದೆ ಬಹಳಷ್ಟು ಪ್ರಾದೇಶಿಕ ಪಕ್ಷ ಗಳಿಗೆ ದಾರಿ ಮಾಡಿಕೊಟ್ಟಿತ್ತು. ಡಿಎಂಕೆಯ ಮೂಲ ಜಸ್ಟೀಸ್ ಪಾರ್ಟಿಯಲ್ಲಿದೆ. ಕಾಂಗ್ರೆಸ್ನಲ್ಲಿದ್ದ ಪೆರಿಯಾರ್ ಇ.ವಿ.ರಾಮಸ್ವಾಮಿ ಅವರು ಜಸ್ಟೀಸ್ ಪಾರ್ಟಿಯನ್ನು 1935ರಲ್ಲಿ ಸೇರಿದರು. ಬಳಿಕ ದ್ರಾವಿಡರ್ ಕಳಗಂ ಸ್ಥಾಪಿಸಿ, ದ್ರಾವಿಡರಿಗೆ ಪ್ರತ್ಯೇಕ ರಾಷ್ಟ್ರ ಬೇಡಿಕೆ ಹಾಗೂ ಹಿಂದಿ ವಿರೋಧಿ ಪ್ರಮುಖ ಅದರ ಪ್ರಮುಖ ನೀತಿಗಳಾಗಿದ್ದವು. ಆದರೆ, ನಂತರದ ದಿನಗಳಲ್ಲಿ ಪ್ರತ್ಯೇಕ ರಾಷ್ಟ್ರ ಹೋರಾಟ ಕೈಬಿಡಲಾಯಿತು. ಈ ಸೈದ್ಧಾಂತಿಕ ವಿಚಾರಧಾರೆಯು ಡಿಎಂಕೆಗೂ ಹರಿದು ಬಂತು. ಆಗ ರಾಮಸ್ವಾಮಿ ಅವರಿಗೆ ಹೆಗಲು ನೀಡಿದ್ದ ಅಣ್ಣಾದೊರೈ ಅವರು ದ್ರಾವಿಡರ್ ಕಳಗಂನಿಂದ ಹೊರಬಂದು ಡಿಎಂಕೆ ಸ್ಥಾಪಿಸಿದರು. ನಂತರ ಅಣ್ಣಾದೊರೈ ಜತೆಯಾಗಿ ಹೆಜ್ಜೆ ಹಾಕಿದವರು ಕರುಣಾನಿಧಿ ಅವರು. ಸದ್ಯ ಡಿಎಂಕೆ ನಾಯಕತ್ವವನ್ನು ಅವರ ಪುತ್ರ ಎಂ.ಕೆ. ಸ್ಟಾಲಿನ್ ವಹಿಸಿದ್ದಾರೆ. ಪ್ರಾದೇಶಿಕತೆ, ಹಿಂದಿ ಹೇರಿಕೆ ವಿರೋಧಿ ನೀತಿ, ಸಾಮಾಜಿಕ ಪ್ರಜಾಪ್ರಭುತ್ವ ನೀತಿಯನ್ನು ಡಿಎಂಕೆ ಅಳವಡಿಸಿಕೊಂಡಿದೆ. ಜನಪ್ರಿಯ ನಾಯಕ ಎಂಜಿಆರ್ ಕೂಡ ಡಿಎಂಕೆ ಭಾರಿ ಬಲ ತುಂಬಿದ್ದರು. ಆದರೆ, ಅವರು ಭಿನ್ನಾಭಿಪ್ರಾಯದಿಂದಾಗಿ ಡಿಎಂಕೆಯಿಂದ ಹೊರ ನಡೆದು, ತಮ್ಮದೇ ಆದ ಎಐಡಿಎಂಕೆ ಸ್ಥಾಪಿಸಿದರು. ಮುಂದೆ ತಮಿಳುನಾಡಲ್ಲಿ ಡಿಎಂಕೆ ಮತ್ತು ಎಐಡಿಎಂಕೆ ನಡುವಿನ ಹೋರಾಟವೇ ರಾಜಕಾರಣವಾಯಿತು. ಸದ್ಯ ಡಿಎಂಕೆ ಯುಪಿಎ ಭಾಗವಾಗಿದೆ.
ಭಾನುವಾರ, ಮಾರ್ಚ್ 10, 2019
ಎರಡನೆಯ ಬಾರಿಗೆ ಕಾಂಗ್ರೆಸ್ಸೇತರ ಸರಕಾರ
ಭಾರತೀಯ ರಾಜಕೀಯ ಇತಿಹಾಸದಲ್ಲಿ 1989ರ ಸಾರ್ವತ್ರಿಕ ಚುನಾವಣೆಗೆ ತನ್ನದೇ ಆದ ಮಹತ್ವವಿದೆ. ಎರಡನೇ ಬಾರಿಗೆ ಕಾಂಗ್ರೆಸ್ಸೇತರ ಸರಕಾರ ಅಸ್ತಿತ್ವಕ್ಕೆ ಬರಲು ಈ ಚುನಾವಣೆಯಿಂದ ಸಾಧ್ಯವಾಯಿತು. ಈ ಹಿಂದಿನ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದ ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್, ಈ ಬಾರಿ ಇನ್ನಿಲ್ಲದಂತೆ ನೆಲಕಚ್ಚಿತು. ಬೊಫೋರ್ಸ್ ಹಗಹರಣ, ಪಂಜಾಬ್ನಲ್ಲಿ ಭಯೋತ್ಪಾದನೆ ಸೇರಿದಂತೆ ಇನ್ನಿತರ ಸಮಸ್ಯೆಗಳು ರಾಜೀವ್ ಆಡಳಿತದ ವಿರುದ್ಧ ಅಲೆ ಏಳುವಂತೆ ಮಾಡಿತು. ಇದರ ಪರಿಣಾಮ, ಜನತಾದಳ ವಿಶ್ವನಾಥ ಪ್ರತಾಪ್ ಸಿಂಗ್ ನೇತೃತ್ವದ ನ್ಯಾಷನಲ್ ಫ್ರಂಟ್ ಅಧಿಕಾರಕ್ಕೆ ಬಂತು. ಬಿಜೆಪಿ ಮತ್ತು ಎಡಪಕ್ಷ ಗಳು ಬಾಹ್ಯ ಬೆಂಬಲ ನೀಡಿದವು. ಚುನಾವಣೆಯಲ್ಲಿ ಜನತಾದಳ 143 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 197 ಕ್ಷೇತ್ರಗಳನ್ನಷ್ಟೇ ಗೆಲ್ಲಲು ಸಾಧ್ಯವಾಯಿತು. ವಿಶೇಷ ಎಂದರೆ, ಕಾಂಗ್ರೆಸ್ ಪಡೆದ ಮತಗಳ ಪ್ರಮಾಣ ಶೇ.39.5ರಷ್ಟಿದ್ದರೆ, ಜನತಾ ದಳ ಮತಪ್ರಮಾಣ ಕೇವಲ 17.8ರಷ್ಟು ಮಾತ್ರ. ಬಿಜೆಪಿ 89, ಎಡಪಕ್ಷ ಗಳು 46 ಸ್ಥಾನಗಳನ್ನು ಗೆದ್ದುಕೊಂಡವು. ಬಿಜೆಪಿಯ ರಾಜಕೀಯ ಬೆಳವಣಿಗೆ ದೃಷ್ಟಿಯಿಂದ ಈ ಚುನಾವಣೆಯು ಮೈಲುಗಲ್ಲು ಎಂದು ಹೇಳಬಹುದು. 1984ರ ಚುನಾವಣೆಯಲ್ಲಿ ಕೇವಲ 2 ಸ್ಥಾನ ಗೆದ್ದಿದ್ದ ಬಿಜೆಪಿ ಈ ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಫಲಿತಾಂಶ ಪಡೆಯಿತು. ನ್ಯಾಷನಲ್ ಫ್ರಂಟ್ನ ನಾಯಕರಾಗಿದ್ದ ವಿಶ್ವನಾಥ ಪ್ರತಾಪ್ ಸಿಂಗ್ ಪ್ರಧಾನಿಯಾದರು. ಆದರೆ, ಅವರ ಆಡಳಿತವೇನೂ ಬಹಳ ದಿನಗಳವರೆಗೆ ಬರಲಿಲ್ಲ. ಬಿಜೆಪಿಯ ಎಲ್.ಕೆ.ಆಡ್ವಾಣಿ ಅವರು ರಾಮರಥ ಯಾತ್ರೆ ಕೈಗೊಂಡಿದ್ದರು. ಬಿಹಾರದಲ್ಲಿ ಲಾಲು ಪ್ರಸಾದ್ ಯಾದವ್ ಸರಕಾರ ಆಡ್ವಾಣಿಯನ್ನು ಬಂಧಿಸಿದ್ದರಿಂದ ಬಿಜೆಪಿ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯಿತು. ವಿಶ್ವನಾಥ ಪ್ರತಾಪ್ ಸಿಂಗ್ ಸರಕಾರವು 1990ರ ನವೆಂಬರ್ನಲ್ಲಿ ಪತನವಾಯಿತು. ಇದೇ ಸಂದರ್ಭದಲ್ಲಿ ಜನತಾ ದಳದ ಮತ್ತೊಬ್ಬ ನಾಯಕ ಚಂದ್ರಶೇಖರ್ ಅವರು ತಮ್ಮೊಂದಿಗೆ 64 ಸದಸ್ಯರನ್ನು ಕರೆದುಕೊಂಡು ದಳದಿಂದ ಹೊರ ಬಂದು ಸಮಾಜವಾದಿ ಜನತಾ ಪಾರ್ಟಿ ಸ್ಥಾಪಿಸಿದರು. ಕಾಂಗ್ರೆಸ್ ಬೆಂಬಲದೊಂದಿಗೆ ಚಂದ್ರಶೇಖರ್ ಪ್ರಧಾನಿಯಾದರು. ಆದರೆ, ರಾಜೀವ್ ಗಾಂಧಿ ವಿರುದ್ಧ ಗೂಢಚರ್ಯ ಮಾಡಲಾಗುತ್ತಿದೆಂದು ಆರೋಪಿಸಿದ ಕಾಂಗ್ರೆಸ್ ಬೆಂಬಲ ವಾಪಸ್ ಪಡೆಯುವುದರೊಂದಿಗೆ ಮತ್ತೊಂದು ಸಾರ್ವತ್ರಿಕ ಚುನಾವಣೆ ಎದುರಾಯಿತು.
ಶುಕ್ರವಾರ, ಮಾರ್ಚ್ 8, 2019
ಕಾರ್ಗಿಲ್ ಗರ್ಲ್- ಗುಂಜನಾ ಸಕ್ಸೇನಾ
ರಣರಂಗದಲ್ಲಿ ಮಹಿಳೆಯರದ್ದು 'ಸಪೋರ್ಟಿಂಗ್ ರೋಲ್' ಆಗಿತ್ತು. ಇತ್ತೀಚಿನ ವರ್ಷಗಳಲ್ಲಿ ಈ ವ್ಯಾಖ್ಯಾನ ಬದಲಾಗಿದೆ. ಪುರುಷರಷ್ಟೇ ಸರಿಸಮಾನವಾಗಿ ರಣರಂಗದಲ್ಲಿ ಓಡಾಡಬಲ್ಲ ಧೀರೆ ಗುಂಜನಾ ಸಕ್ಸೇನಾ ಅಂಥ ಉದಾಹರಣೆಗಳಲ್ಲೊಬ್ಬರು. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಮೊದಲ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆ. ಸೇನಾ ವಲಯ ಹಾಗೂ ಕುಟುಂಬಸ್ಥರು ಗುಂಜನಾ ಅವರನ್ನು 'ಕಾರ್ಗಿಲ್ ಗರ್ಲ್' ಎಂದು ಪ್ರೀತಿಯಿಂದ ಕರೆಯುತ್ತಾರೆ. ಸೇನೆ ಗುಂಜನಾಗೆ ಹೊಸದಲ್ಲ. ತಂದೆ ಹಾಗೂ ಸಹೋದರರಿಬ್ಬರೂ ಸೇನೆಯಲ್ಲಿ ಅಪ್ರತಿಮ ಸಾಹಸ ಮೆರೆದವರು. ದಿಲ್ಲಿ ವಿವಿಯ ಹಂಸರಾಜ್ ಕಾಲೇಜ್ನಲ್ಲಿ ಡಿಗ್ರಿ ಪಡೆದ ಬಳಿಕ, ಸೇನೆ ಸೇರುವುದೊಂದೇ ಅವರ ಮುಂದಿದ್ದ ಆಯ್ಕೆ. 1994ರಲ್ಲಿ ಗುಂಜನಾ ಸಕ್ಸೇನಾ, ಶ್ರೀವಿದ್ಯಾ ರಾಜನ್ ಸೇರಿದಂತೆ 25 ಮಹಿಳೆಯರ ಮೊದಲ ಪೈಲಟ್ ತಂಡವನ್ನು ಭಾರತೀಯ ವಾಯುಪಡೆ ರಚಿಸಿತು. ಹೀಗಿದ್ದರೂ, ಮಹಿಳಾ ತಂಡದ ಸೇವೆ ಸಂಪೂರ್ಣವಾಗಿ ಸೇನೆಗೆ ಲಭ್ಯವಾಗಿದ್ದು 2016ರಲ್ಲಿ. ಆದರೆ, ಗುಂಜನಾ ಮತ್ತು ಶ್ರೀವಿದ್ಯಾ ಅವರ ಸಾಹಸಗಾಥೆ 1999ರ ಕಾರ್ಗಿಲ್ ಯುದ್ಧದ ವೇಳೆಯಲ್ಲಿ ಜಗಜ್ಜಾಹೀರಾಯಿತು. ಸೇನೆ ಇನ್ನೂ ಮಹಿಳೆಯರನ್ನು ಯುದ್ಧಭೂಮಿಗೆ ಕಳುಹಿಸಬೇಕೇ ಬೇಡವೇ ಎಂಬ ದ್ವಂದ್ವದಲ್ಲಿದ್ದಾಗಲೇ, ಈ ಮಹಿಳೆಯರಿಬ್ಬರು ಇಡೀ ಯುವತಿಯರಿಗೆ ರೋಲ್ ಮಾಡೆಲ್ ಆಗುವ ಸಾಹಸ ಮೆರೆದರು.
ಹಾಗೆ ನೋಡಿದರೆ, ಫ್ಲೈಟ್ ಲೆಫ್ಟಿನೆಂಟ್ ಗುಂಜನಾ ಮತ್ತು ಶ್ರೀವಿದ್ಯಾ ಅವರು ಫೈಟರ್ ಜೆಟ್ಗಳ ಹಾರಾಟ ನಡೆಸಿರಲಿಲ್ಲ. ಆದರೆ, ಕಾರ್ಗಿಲ್ ಯುದ್ಧ ತುತ್ತತುದಿಯಲ್ಲಿದ್ದಾಗ, ಭಾರತೀಯ ವಾಯುಪಡೆ ತನ್ನೆಲ್ಲ ಪೈಲಟ್ಗಳ ಗರಿಷ್ಠ ಸೇವೆಯನ್ನು ಬಳಸಿಕೊಳ್ಳಲು ಮುಂದಾಯಿತು. ಆಗ, ಗುಂಜನಾ ಮತ್ತು ಶ್ರೀವಿದ್ಯಾ ಅವರಿಗೆ ಕರೆ ಬಂತು. ಗಾಯಾಳು ಯೋಧರ ಸ್ಥಳಾಂತರ ಮತ್ತು ಯುದ್ಧಭೂಮಿಯಲ್ಲಿ ಪಾಕಿಸ್ತಾನದ ಸ್ಥಿತಿಯನ್ನು ಗುರುತಿಸಿ ಮಾಹಿತಿ ನೀಡುವ ಟಾಸ್ಕ್ ನೀಡಲಾಯಿತು. ಅಚ್ಚರಿಯ ಸಂಗತಿ ಎಂದರೆ, ಗುಂಜನಾ ಮತ್ತು ಶ್ರೀವಿದ್ಯಾ ಹಾರಾಟ ಮಾಡಲಿರುವ ಹೆಲಿಕಾಪ್ಟರ್ಗಳು ತುಂಬ ಚಿಕ್ಕವು ಮತ್ತು ಶಸ್ತ್ರರಹಿತವಾಗಿದ್ದವು. ಒಮ್ಮೆ ಇವರು ತಮ್ಮ ಕಾಪ್ಟರ್ ಅನ್ನು ಕಾರ್ಗಿಲ್ ಏರ್ಸ್ಟ್ರಿಪ್ನಿಂದ ಟೇಕ್ ಆಫ್ ಮಾಡುತ್ತಿರುವಾಗಲೇ ಪಾಕಿಸ್ತಾನದ ಕ್ಷಿಪಣಿಯೊಂದು ಇವರತ್ತ ನುಗ್ಗಿ ಬಂತು. ಆಗ ಸ್ವಲ್ಪದರಲ್ಲಿ ಕಾಪ್ಟರ್ ಅದರಿಂದ ತಪ್ಪಿಸಿಕೊಂಡಿತು. ಇಂಥ ಸಾವಿನ ಸಮೀಪ ಹೋದ ಅನೇಕ ಅನುಭವವಗಳು ಗುಂಜನಾ ಅವರಿಗೆ ಕಾರ್ಗಿಲ್ ಯುದ್ಧದ ವೇಳೆ ಆದವು. ಒಂದೊಮ್ಮೆ ಕಾಪ್ಟರ್ ಅಪಘಾತಕ್ಕೀಡಾಗಿ ವೈರಿಗಳ ನೆಲದಲ್ಲಿ ಬಿದ್ದರೆ ನೆರವಿಗೆ ಇರಲಿ ಎಂದು ಗುಂಜನಾ ತಮ್ಮ ಬಳಿ ಐಎನ್ಎಸ್ಎಎಸ್ ರೈಫಲ್ ಮತ್ತು ರಿವಾಲ್ವರ್ ಇಟ್ಟುಕೊಳ್ಳುತ್ತಿದ್ದರು. ಯುದ್ಧಭೂಮಿಯಲ್ಲಿ ನೇರವಾಗಿ ಭಾಗಿಯಾದ ಮೊದಲ ಮಹಿಳಾ ಪೈಲಟ್ಗಳೆಂಬ ಖ್ಯಾತಿ ಅವರಿಗೆ ಅಂಟಿಕೊಂಡಿತು. ಕಾಪ್ಟರ್ ಪೈಲಟ್ ಆಗಿದ್ದ ಗುಂಜನಾ ಅವರು ಕೇವಲ 7 ವರ್ಷದವರೆಗೆ ಮಾತ್ರ ಸೇವೆ ಸಲ್ಲಿಸಿದರು. ಕಾರ್ಗಿಲ್ನಲ್ಲಿ ತೋರಿದ ಅಪ್ರತಿಮ ಸಾಹಸಕ್ಕಾಗಿ ಶೌರ್ಯವೀರ ಪದಕ ನೀಡಲಾಯಿತು. ಎಲ್ಲಕ್ಕಿಂತ ಸಾವಿರಾರು ಯುವತಿಯರಿಗೆ ಸೇನೆ ಸೇರುವ ಸ್ಫೂರ್ತಿಯಾದರು.

ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
-
ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾ ‘ ಜೈ ಭೀಮ್ ’ ಸದ್ದು ಮಾಡುತ್ತಿದೆ . ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ ಕೆ . ಚಂದ್ರು . ...
-
ನನ್ನೊಳಗಿನ ಭಾವನೆಗಳಿಗೆ ಹಚ್ಚಬೇಕಿದೆ ಬಣ್ಣ, ಹಸಿರಾಗುವ ನೆಪದಲ್ಲಿ ಕೊಸರಾಡುವ ಕನಸುಗಳಿಗೆ ಕಟ್ಟಬೇಕಿದೆ ಬೇಲಿ. ಹಾರಬೇಕಿದೆ ಮುಗಿಲೇತ್ತರಕ್ಕೆ ಎಲ್ಲ ನಿಯಮ ಮೀರಿ ಗೆಲ್ಲಬೇಕ...