- ಆಕೆ ಬಿಟ್ಟು ಹೋದ ಗಿಫ್ಟ್‌ನೊಂದಿಗೆ ಮತ್ತೆ ಹೊಸ ವರುಷದ ನಿರೀಕ್ಷೆಯಲ್ಲಿ....
- ಪ್ರದ್ಯುಮ್ನ
ಇಡೀ ಜಗತ್ತೇ ಹೊಸ ವರ್ಷದ ಆಚರಣೆಯ ಅಮಲಿನಲ್ಲಿ ಮುಳುಗಿದೆ. ಮಹಾನಗರಗಳ ಪಬ್ಬು, ಕ್ಲಬ್ಬುಗಳಲ್ಲಿ ಮದ್ಯಾರಾಧನೆಯೂ, ಬ್ಯಾಚುಲರ್‌ಗಳ ರೂಮ್‌ಗಳ ತುಂಬ ಬೀಯರ್- ರಮ್ ವಾಸನೆಯೂ, ರಸ್ತೆಗಳ ತುಂಬೆಲ್ಲ ಸೈಲೆನ್ಸರ್ ತೆಗೆದು ಕರ್ಣ ಕರ್ಕಶವಾಗಿ ಚೀರುತ್ತಾ ಓಡುವ ಬೈಕ್‌ಗಳೂ, ಅವುಗಳನ್ನು ಓಡಿಸುವ ನಶೆಯ ಸವಾರರೂ, ಅವರ ಬಾಯಿಂದ ಅಷ್ಟೇ ವಿಕಾರವಾಗಿ ಹೊರಡುವ ಹ್ಯಾಪಿ ನ್ಯೂ ಇಯರ್ ಎಂಬ ಪದಗಳೂ, ಆಕಾಶದ ತುಂಬ ಬಿರುಸು ಬಾಣ ಚಿತ್ತಾರಗಳೂ, ಆ ಸಂತೋಷದ ಕ್ಷಣಗಳೂ... ಇವೆಲ್ಲವೂ ಒಂದು ರೀತಿಯ ಕೊಲಾಜ್. ಇಂಥ ಚಿತ್ರಿಕೆಗಳಿಗೆ ಸಾವಿಲ್ಲ. ಹೊಸ ವರ್ಷವೆಂಬ ಕ್ಯಾನ್ವಾಸ್‌ನಲ್ಲಿ ಪ್ರತಿ ಬಾರಿಯೂ ಒಡಮೂಡಿ, ಸರಿದು ಹೋಗುವ ಚಿತ್ರಗಳು. ಇವಕ್ಕೆ ಕಲಾವಿದನ ಹಂಗಿಲ್ಲ. ಆದರೆ, ಇಂಥ ಸಂತೋಷದ ಕ್ಷಣಗಳನ್ನು ಆಸ್ವಾದಿಸುವ, ರಸಗಳಿಗೆಗಳನ್ನು ಸವಿಯುವ ಸಾಮರ್ಥ್ಯವನ್ನು ನಾನು ಕಳೆದುಕೊಂಡು ಸುಮಾರು ವರ್ಷಗಳಾದವು. ನೀಲಾಕಾಶದಲ್ಲಿ ಚಿತ್ತಾರದ ಸುರುಳಿಗಳು ಬಿಚ್ಚಿಕೊಂಡಾಗಲೆಲ್ಲ ನನ್ನೊಳಗೂ ಭಾವನೆಗಳ ಉಬ್ಬರ. ಅದೆಷ್ಟೋ ಹೊಸ ವರ್ಷಗಳ ಬಂದರೂ, ಹಳೆಯ ನೆನಪಗಳನ್ನೆಲ್ಲ ಗಂಟೆ ಮೂಟೆ ಕಟ್ಟಿಡಲು ಸಾಧ್ಯವಿಲ್ಲ. ಹೊಸ ಹೊಸ ವಸಂತ ತೆರೆದುಕೊಂಡಾಗಲೆಲ್ಲ ನೆನಪುಗಳ ಆಯುಷ್ಯ ಜಾಸ್ತಿಯಾಗುತ್ತಲೇ ಹೋಗುತ್ತದೆ. ಈ ನೆನಪುಗಳೇ ಹಾಗೇ, ಅವುಗಳಿಗೆ ಸಾವಿಲ್ಲ, ಬಣ್ಣವಿಲ್ಲ, ನಿರ್ಗುಣ, ನಿರಾಕಾರ! ಆದರೆ, ಅವುಗಳೊಳಗೇ ತುಂಬಿರುವ ನೋವಿನ ಆಲಾಪನೆ ಮಾತ್ರ ಎಂದಿಗೂ ಸಹಿಸಲು ಅಸಾಧ್ಯ.
ಹೊಸ ವರ್ಷದ ಹಿಂದಿನ ರಾತ್ರಿ ಎಂದರೆ; ನೋವಿನ ಕರಾಳ ರಾತ್ರಿ. ಆ ರಾತ್ರಿಯನ್ನು ನೆನೆಸಿಕೊಂಡರೇ ಈಗಲೂ ಮೈಯಲ್ಲಿ ನಡುಕ. ಉನ್ಮಾದದಲ್ಲಿ ಮಾಡಲು ಹೋದ ಹುಡುಗಾಟಿಕೆ ಇಡೀ ಜೀವನವನ್ನು ನೋವಿನ ಸರಪಳಿಯಲ್ಲಿ ಬಂಧಿಸಿಟ್ಟಿದೆ. ಆಕೆ ಬಿಟ್ಟು ಹೋದ ಹೊಸ ವರ್ಷದ ಗಿಫ್ಟ್ ಬಾಕ್ಸ್ ಇನ್ನೂ ಹಾಗೆಯೇ ಇದೆ; ಭದ್ರವಾಗಿದೆ. ಅದರೊಳಗೇನಿದೆ? ಗೊತ್ತಿಲ್ಲ. ಅದನ್ನು ಒಡೆದು ನೋಡುವ ಸಾಹಸ ಮಾಡಲು ನನ್ನಿಂದ ಸಾಧ್ಯವಿಲ್ಲ. ಅದು ಹಾಗೆಯೇ ಇರಬೇಕು; ಅದು ಆಕೆಯ ನಿಷ್ಕಲ್ಮಶ ಪ್ರೀತಿಯ ಕುರುಹು. ಅದರಲ್ಲಿ ನನಗಾಗಿ ಏನು ಕೊಟ್ಟಿರಬಹದು ಎಂಬೆಲ್ಲ ಲೆಕ್ಕಾಚಾರಗಳೇ, ಊಹೆಗಳೇ ನನ್ನೊಳಗೇ ಆಕೆಯನ್ನು ಜೀವಂತವಾಗಿಟ್ಟಿವೆ. ಒಡೆದು ನೋಡಿದರೆ ಊಹೆಗೂ, ಕಲ್ಪನೆಗೂ ಆಕಾರ ದಕ್ಕಿಬಿಡುತ್ತದೆ. ಅದನ್ನು ಸಹಿಸಿಕೊಳ್ಳುವ ಶಕ್ತಿ ನನಗಿಲ್ಲ. ಅದು ಹಾಗೆಯೇ ಇದ್ದರೆ ಚೆನ್ನ. ನಿಗೂಢ ಕಾಣಿಕೆಯಾಗಿ, ನನ್ನನ್ನು ಸದಾ ಅವಳ ನೆನಪಿನಲ್ಲಿರುವಂತೆ ಮಾಡುವ ಏಕೈಕ ಸಾಧನವದು. ಮೋಸ್ಟಲೀ... ನನ್ನೊಂದಿಗೇ ಅದರ ಗುಟ್ಟು ಹೊರಟು ಹೋಗಬಹುದು.
ನಾವಾದರೂ ಹೇಗಿದ್ದವು? ಸ್ವರ್ಗಕ್ಕೆ ಕಿಚ್ಚು ಹಚ್ಚುವ ಪ್ರೀತಿಯದು. ನಮ್ಮನ್ನು ನೋಡಿ ಹಲುಬಿದವರು ಅನೇಕರು. ಅದೊಂದು ದಿವ್ಯ ಅನುಭೂತಿ. ಪ್ರೀತಿ ಕೊಟ್ಟು ಪ್ರೀತಿಯನ್ನು ಪಡೆದಾಗಲೇ ದಕ್ಕುವ ಅನನ್ಯ ಅನುಭವವದು; ಅದಕ್ಕೇ ಸಾಟಿಯೇ ಇಲ್ಲ, ಅವಳಿಗೂ. ಸದಾ ಚಟುವಟಿಕೆಯ ಚಿಲುಮೆ ಅವಳು. ಮುಂಗರುಳು ಸರಿಸುತ್ತಾ, ಪಟಪಟನೆ ಮಾತನಾಡುವ ಅವಳನ್ನು ನೋಡುವುದೇ ಚಂದ. ಅವಳ ಬಟ್ಟಲುಗಣ್ಣುಗಳಲ್ಲಿ ನೂರಾರು ಭರವಸೆ, ಏನೇನೋ ಮಾಡುವ ಹುಮ್ಮಸ್ಸು, ಒಮ್ಮೆಲೇ ನಭಕ್ಕೆ ನೆಗೆಯುವ ಅತ್ಯುತ್ಸಾಹ. ಅವಳನ್ನು ನೋಡಿದ ಯಾರಿಗಾದರೂ ಜೀವನೋತ್ಸಾಹ ಇಮ್ಮಡಿಯಾಗುವುದರಲ್ಲಿ ಸಂಶಯವೇ ಇರಲಿಲ್ಲ. ಗಗನಸಖಿಯಾಗಿ ವಿಮಾನದಲ್ಲಿ ಪ್ರಪಂಚ ಪರ್ಯಟನೆ ಮಾಡುವ ಅದಮ್ಯ ಬಯಕೆ ಆಕೆಯದ್ದು. ಆದರೆ?
ಅವಳೆಲ್ಲ ಕನಸುಗಳನ್ನು, ಹೆಬ್ಬಯಕೆಗಳನ್ನು ನಾನೇ ಕೊಂದು ಹಾಕಿದಿನಾ? ಇಂಥದೊಂದು ಗಿಲ್ಟ್ ಕಳೆದ ಐದು ವರ್ಷಗಳಿಂದ ಕಾಡುತ್ತಲೇ ಇದೆ. ನನ್ನಿಂದಾಗಿ ಅವಳ ಬದುಕೇ ಬರ್ಬಾದಾಗಿ ಹೋಯಿತು. ನನ್ನ ಒಂದು ಬೇಜವಾಬ್ದಾರಿ, ಅವಳ ಜೀವನದ ಪಥವನ್ನೇ ಬದಲಿಸಿ ಮುಂದೆ ದಾರಿಯಿಲ್ಲದ ಅಂಚಿನಲ್ಲಿ ತಂದು ನಿಲ್ಲಿಸಿದೆ ಅವಳನ್ನು. ನನ್ನ ಕನಸುಗಳನ್ನೂ ತನ್ನ ಕನಸಗಳೆಂದೇ ಭಾವಿಸಿ, ಸಂಭ್ರಮಸುತ್ತಿದ್ದ ಆಕೆಯಲ್ಲಿ ಕಣ್ಣಗಳಲ್ಲಿ ಆಕೆಯದ್ದೇ ಕನಸುಗಳಿಲ್ಲ. ಅವೆಲ್ಲವೂ ಮುರುಟಿ ಹೋಗಿವೆ. ಅವಳ ಮುಂದೆ ಹೊಸ ವರ್ಷದ ಆಚರಣೆಯ ಬಾಣ ಬಿರುಸಗಳು ಸೃಷ್ಟಿಸುವ ಚಿತ್ತಾರಗಳು ಕೇವಲ ಢಂ.. ಢಂ.. ಎನ್ನುವ ಶಬ್ಧವಷ್ಟೇ. ಅವುಗಳಿಗೆ ಆಕಾರವಿಲ್ಲ, ಸೌಂದರ್ಯವಿಲ್ಲ.
ಅಂದು ಹೀಗೆಯೇ, ಹೊಸ ವರ್ಷದ ಅಮಲಿನಲ್ಲಿ ತೇಲುತ್ತಾ, ಸಂತೋಷದ ರಣಕೇಕೆ ಹಾಕುತ್ತಾ ಹೊರಟಿತ್ತು ನಮ್ಮ ಟೀಮ್. ನನ್ನ ಬೈಕಿನಲ್ಲಿ ಹಿಂದೆ ಕುಳಿತ ಅವಳ ಸಂತೋಷಕ್ಕೆ ಪಾರವೇ ಇರಲಿಲ್ಲ. ಯಾಕೆ ಗೊತ್ತಾ? ಮುಂದಿನ ವಾರ ಅವಳು ಗಗನಸಖಿಯಾಗಿ ಆಕಾಶದಲ್ಲಿ ಹಾರಾಡುವವಳಿದ್ದಳು. ಏರ್‌ಲೈನ್ಸ್ ಕಂಪನಿಯೊಂದು ಆಕೆಗೆ ಆಫರ್ ಲೆಟರ್ ಕೂಡ ಕೊಟ್ಟಿತ್ತು. ಅದೇ ಹುಮ್ಮಸ್ಸಿನಲ್ಲಿ ನನಗೊಂದು ಪುಟ್ಟ ಆ ‘ಗಿಫ್ಟ್’ ಕೊಟ್ಟಿದ್ದಳು. ನಮ್ಮ ಇಡೀ ಟೀಂಗೆ ಅವಳದ್ದೇ ಪಾರ್ಟಿ. ಎಂಟೊಂಭತ್ತು ಜನರಿದ್ದ ನಾವು, ಹೊಸ ವರ್ಷಕ್ಕೆ ಸೇರುವ ಆ ಬೃಹತ್ ರೋಡಿನಲ್ಲಿ ಕುಣಿದು ಕುಪ್ಪಳಿಸಲು ಅಷ್ಟೇ ವೇಗವಾಗಿ ಹೊರಟಿದ್ದವು. ಗಂಟಲೊಳಗೇ ಇಳಿದು ಹೋಗಿದ್ದು ತುಸು ವಿಸ್ಕಿ ನನ್ನನ್ನು ಸಂಪೂರ್ಣವಾಗಿ ನಿಯಂತ್ರಣ ತೆಗೆದುಕೊಳ್ಳುವ ಸನ್ನಾಹದಲ್ಲಿತ್ತು. ಆದರೆ, ಹುಚ್ಚು ಧೈರ್ಯದಿಂದ ಬೈಕಿ ಆ್ಯಕ್ಸಿಲೆಟರ್ ಕಿವಿಯೊತ್ತಿ ಬುರ್ರೆಂದು ಹೊರಟ ನಮಗೆ, ಮುಂದಾಗುವ ಅಪಘಾತದ ಮುನ್ಸೂಚನೆಯೇ ಇರಲಿಲ್ಲ. ಹಿಂದಿದ್ದ ಅವಳ ದನಿಯಲ್ಲಿ ಸಂತೋಷ ಉನ್ಮಾದವಿತ್ತು, ಕನಸು ಸಾಕಾರಗೊಂಡು ಸಂಭ್ರಮವಿತ್ತು. ಪ್ರೀತಿಸುವವನ ತೋಳು ತೆಕ್ಕೆಯಲ್ಲಿ ಬಂಧಿಯಾಗುವ ದಿನಗಳ ಬಗ್ಗೆ ಲೆಕ್ಕ ಹಾಕುತ್ತಲೇ, ‘‘ನೋಡು ಇನ್ನೆರಡು ವರ್ಷದಲ್ಲಿ ನಾವಿಬ್ಬರು ಮದ್ವೆ ಆಗೋಣ. ಅಷ್ಟರಲ್ಲಿ ನಾನು ಇಡೀ ಜಗತ್ತು ಸುತ್ತಿ ಬರುತ್ತೇನೆ,’’ ಎಂದು ಹೇಳುತ್ತಿದ್ದ ಆಕೆಯ ಮಾತುಗಳು ಈಗಲೂ ಕಿವಿಯಲ್ಲಿ ಅಷ್ಟೇ ಗಟ್ಟಿಯಾಗಿ ಕೇಳಿಸುತ್ತಲೇ ಇರುತ್ತವೆ. ಆಕೆಯ ಮಾತುಗಳಿಗೆಲ್ಲ ‘‘ಎಸ್ ಬಾಸ್,’’ ಎನ್ನುತ್ತಲೇ ಆ್ಯಕ್ಸಿಲೆಟರ್ ತಿರುವುತ್ತಾ ಹೋದವನಿಗೆ, ಎದುರಾಗಿದ್ದು ನಮ್ಮಂತೆಯೇ ಸಂತೋಷದ ಅಮಲಿನಲ್ಲಿ ತೇಲಾಡುತ್ತಿದ್ದ ಜೋಡಿ ಇದ್ದ ಬೈಕ್. ತಪ್ಪು ಅವರದ್ದಾ.. ನಾನು ಮಾಡಿದ್ದು ತಪ್ಪಾ ಎನ್ನುವುದಕ್ಕಿಂತ, ಏನು ಆಗಬಾರದಿತ್ತೋ ಅದು ಆಗಿ ಹೋಗಿತ್ತು. ನಮ್ಮಿಬ್ಬರ ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ, ನಾವಿಬ್ಬರು ರೋಡ್ ಡಿವೈಡರ್‌ಗೆ ಬಡಿದಿದ್ದಾಯಿತು. ಅಷ್ಟೇ ಗೊತ್ತು. ಮುಂದೆನಾಯ್ತು? ಕಣ್ತೆರೆದು ನೋಡಿದಾಗ, ನಾವಿದ್ದದ್ದು ಆಸ್ಪತ್ರೆಯಲ್ಲಿ. ತಲೆಗೆ ಸ್ವಲ್ಪ ಪೆಟ್ಟು ಬಿದ್ದು, ಅಂಥ ಅಪಾಯವೇನಾಗಿರಲಿಲ್ಲ ನನಗೆ. ಆದರೆ, ಅವಳಿಗೆ? ಆಕೆ ತನ್ನ ಕಣ್ಣು ಕಾಂತಿಯನ್ನೇ ಕಳೆದುಕೊಂಡಿದ್ದಳು. ಮಿರರ್‌ನ ಚೂರುಗಳ ಆಕೆಯ ದೃಷ್ಟಿಯನ್ನು ತೆಗೆದು ಹಾಕಿದ್ದವು. ಅಲ್ಲಿಗೆ, ಆಕೆಯ ಇಡೀ ಕನಸು ಕತ್ತಲೆಯಲ್ಲಿ ಮುಳುಗಿ ಹೋಗಿತ್ತು. ಅದಕ್ಕೆ ನಾನು ಕಾರಣನಾದ ಗಿಲ್ಟು! ಹೊಸ ವರ್ಷದ ಸಂಭ್ರಮ ಈಗಲೂ ನನಗೆ ಅದೇ ನೋವನ್ನು ನೆನಪಿಸುವ, ಮಾಯದ ಗಾಯವನ್ನು ಮತ್ತೆ ಕೆದುಕುವ ದಿನವಷ್ಟೆ. ನನ್ನ ಬೇಜವಾಬ್ದಾರಿಯ ರೈಡಿಂಗ್ ಆಕೆಯ ಜೀವನದ ಮೇಲೆಯೇ ಭಾರಿ ಸವಾರಿ ಮಾಡಿ ಬಿಟ್ಟಿತ್ತು. ಅವಳೀಗ ಮೊದಲಿನಂತಿಲ್ಲ. ಅವಳಿಗೇ ಇಡೀ ಜಗತ್ತೇ ಕತ್ತಲು. ಆ ಗಾಢ ಕತ್ತಲಿನಲ್ಲಿ ನಾನು ಮಾತ್ರ ಮಿಣುಕುವ ದೀಪ ಅವಳಿಗೆ. ಆದರೆ, ಅವಳಪ್ಪನ ಸಿಟ್ಟಿಗೆ ಸುಮ್ಮನಿದ್ದಾಳೆ; ಅದ ಸಹಜವೂ ಕೂಡ.
ಅವಳು ಜತೆಯಲ್ಲಿ ಇಲ್ಲದಿರಬಹುದು. ಆದರೆ, ಆಕೆ ಕೊಟ್ಟ ಹೋದ ದಿವ್ಯ ಪ್ರೀತಿ, ಅನನ್ಯ ಅನುಭೂತಿ ಇದೆ. ಆಕೆ ಬಿಟ್ಟು ಹೋಗಿರುವ ನೂರಾರು ನೆನಪುಗಳಿವೆ. ಅಷ್ಟು ಸಾಕು. ತೀರಾ ದುಃಖವಾದಾಗ, ಆಕೆಯ ಆ ‘ಗಿಫ್ಟ್ ’ ಮತ್ತೆ ನನ್ನಲ್ಲಿ ಅದಮ್ಯ ಪ್ರೀತಿಯನ್ನು ಸ್ಪುರಿಸುತ್ತದೆ. ನೆನಪುಗಳಿಗೆ ಜೀವ ತುಂಬುತ್ತದೆ. ಆ ಕರಾಳ ರಾತ್ರಿಯ ಕಹಿ ನೆನಪನ್ನು ಮರೆ ಮಾಚುತ್ತದೆ. ಅದುವೇ ಆಕೆಯ ಪ್ರೀತಿಯ ದಿವ್ಯ ಸಾನ್ನಿಧ್ಯವನ್ನು ಕಲ್ಪಿಸುತ್ತದೆ. ನಾನು ಈಗಲೂ ಅವಳ ನಿರೀಕ್ಷೆಯಲ್ಲಿದ್ದೇನೆ, ಆಕೆ ನನ್ನ ಮೇಲಿಟ್ಟಿರುವ ಪ್ರೀತಿಗೆ ಅವರಪ್ಪ ಸೋಲುತ್ತಾನೆಂಬ ನಿರೀಕ್ಷೆಯಲ್ಲಿ ಆಕೆಯೂ ಇದ್ದಾಳೆ, ನಾನು ಕೂಡ. ಆ ದಿನಕ್ಕಾಗಿ ಎದುರು ನೋಡುತ್ತಿದ್ದೇನೆ. ಆಕೆಗೆ ಜೀವನಪೂರ್ತಿ ಕಣ್ಣಾಗಿ, ಆಕೆ ಕಂಡ ಕನಸಗಳಿಗೆ ನಾನು ಜೀವ ತುಂಬುತ್ತೇನೆ. ಅವಳ ಕಣ್ಣಲ್ಲಿ ಕಾಂತಿ ತುಂಬುವ ಹಂಬಲ ನನ್ನದು.
This article has published in VijayKarnataka, on 2nd jan 2017 edition