ಬಿಜೆಪಿ ಸದ್ಯ ಗೆಲುವಿನ ಅಶ್ವ ಏರಿ ಶರವೇಗದಲ್ಲಿ ಸಾಗುತ್ತಿರುವ ಪಕ್ಷ . ಕಾಂಗ್ರೆಸ್‌ಗೆ ಪರ್ಯಾಯ ಮತ್ತು ಬಲಿಷ್ಠ ರಾಜಕೀಯ ವ್ಯವಸ್ಥೆಯನ್ನು ರೂಪಿಸಿದ ಹೆಗ್ಗಳಿಕೆ ಬಿಜೆಪಿಗೆ ಸಲ್ಲುತ್ತದೆ. ಬಿಜೆಪಿಯ ಮೂಲ ಭಾರತೀಯ ಜನ ಸಂಘ ಪಕ್ಷ ದಲ್ಲಿದೆ. ಶ್ಯಾಮ ಪ್ರಸಾದ್ ಮುಖರ್ಜಿ ಅವರು 1951ರಲ್ಲಿ ಬಿಜೆಎಸ್ ಸ್ಥಾಪಿಸಿದರು. 1977ರ ನಂತರ ಬಿಜೆಎಸ್ ಅನ್ನು ಜನತಾ ಪರಿವಾರದೊಂದಿಗೆ ವಿಲೀನ ಮಾಡಲಾಯಿತು. ಮೂರು ವರ್ಷದ ಬಳಿಕ ಜನತಾ ಪರಿವಾರ ಛಿದ್ರವಾಗಿ, ಭಾರತೀಯ ಜನಸಂಘವು ಭಾರತೀಯ ಜನತಾ ಪಾರ್ಟಿಯಾಗಿ ಮರುಜನ್ಮ ಪಡೆದುಕೊಂಡಿತು. ಆರಂಭದಲ್ಲಿ ಅಂಥ ಹೇಳಿಕೊಳ್ಳುವ ಯಶಸ್ಸು ದೊರೆಯಲಿಲ್ಲ. 1984ರ ಚುನಾವಣೆಯಲ್ಲಿ ಕೇವಲ 2 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಆದರೆ, ನಂತರದ ದಿನಗಳಲ್ಲಿ ರಾಮಜನ್ಮಭೂಮಿ ವಿವಾದ ಬಿಜೆಪಿಯ ರಾಜಕಾರಣಕ್ಕೆ ಹೊಸದಿಕ್ಕನ್ನೇ ತೋರಿಸಿತು. ನಿಧಾನವಾಗಿ ರಾಜ್ಯಗಳಲ್ಲಿ ತನ್ನ ಬೇರುಗಳನ್ನು ಚಾಚುತ್ತಾ, ಕೇಂದ್ರ ಮಟ್ಟದಲ್ಲಿ ಗಣನೀಯವಾಗಿ ತನ್ನ ಸೀಟುಗಳನ್ನು ಹೆಚ್ಚಿಸಿಕೊಳ್ಳುತ್ತಾ ಹೋಯಿತು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್.ಕೆ. ಆಡ್ವಾಣಿಅವರು ಬಿಜೆಪಿಗೆ ಸಮರ್ಥ ನಾಯಕತ್ವ ಒದಗಿಸಿದರು. 1996ರ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷ ವಾಗಿ ಹೊರಹೊಮ್ಮಿ ವಾಜಪೇಯಿ ನೇತೃತ್ವದಲ್ಲಿ ಸರಕಾರ ರಚಿಸಿತು. ಆದರೆ, ಬಹುಮತ ಕೊರತೆಯಿಂದ 13 ದಿನದಲ್ಲಿ ಪತನ ಕಂಡಿತು. 1998ರಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತದೊಂದಿಗೆ ಅಧಿಕಾರಕ್ಕೇರಿತು. 2014ರಲ್ಲಿ ಮೋದಿ ನೇತೃತ್ವದಲ್ಲಿ ಪ್ರಚಂಡ ಬಹುಮತದೊಂದಿಗೆ ಮತ್ತೆ ಅಧಿಕಾರದಲ್ಲಿರುವ ಬಿಜೆಪಿ, ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದೆ ಪಕ್ಷ ಎಂಬ ಹೆಗ್ಗಳಿಕೆ ಇದೆ. ಸದ್ಯ 10 ರಾಜ್ಯಗಳಲ್ಲಿ ಬಿಜೆಪಿ ನೇರವಾಗಿ ಅಧಿಕಾರದಲ್ಲಿದ್ದರೆ, 7 ರಾಜ್ಯಗಳಲ್ಲಿ ಬಿಜೆಪಿ ಮೈತ್ರಿ ಸರಕಾರಗಳಿವೆ. ಬಲಪಂಥೀಯ ವಿಚಾರಧಾರೆ ಹೊಂದಿರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಗಿ ಅಮಿತ್ ಶಾ ಕಾರ್ಯನಿರ್ವಹಿಸುತ್ತಿದ್ದಾರೆ.
ವಿಜಯ ಕರ್ನಾಟಕದಲ್ಲಿ ಈ ಲೇಖನ ಪ್ರಕಟವಾಗಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ.
https://vijaykarnataka.indiatimes.com/elections/lok-sabha/news/bjp-party-history/articleshow/68219784.cms
ವಿಜಯ ಕರ್ನಾಟಕದಲ್ಲಿ ಈ ಲೇಖನ ಪ್ರಕಟವಾಗಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ.
https://vijaykarnataka.indiatimes.com/elections/lok-sabha/news/bjp-party-history/articleshow/68219784.cms