ಕತ್ತಲೆಯೇ ಬದುಕೆಂದು
ನಂಬಿದ ನಾನು ಈಗೀಗ
ನಗಲು ಪ್ರಯತ್ನಿಸುತ್ತಿದ್ದೇನೆ
ದುಃಖದ ಸಾಗರದಲ್ಲಿ ಕೈ
ಬಿಟ್ಟು ನೀ ಹಿಂತಿರುಗಿ ನೋಡದೆ
ಹೋದಾಗ ಸಾಯಬೇಕೆಂದು
ಕೊಂಡವನಿಗೆ ಅಲೆಗಳೇ
ಈಜು ಕಲಿಸಿ ದಡಕ್ಕೆ ಎಸೆದಿವೆ ನನ್ನನ್ನು.
----
ಈಗೀಗ ಪ್ರತಿ ಸೂರ್ಯನ ಹುಟ್ಟು
ಸಾವು ಕೂಡಾ ಆಸಕ್ತಿ ಹುಟ್ಟಿಸುತ್ತಿದೆ
ರಾತ್ರಿಯಲ್ಲಿ ಚಂದ್ರನ ತಣ್ಣನೆಯ
ಬೆಳಗು ಕೂಡಾ ಹೊಮ್ಮಿಸುತ್ತಿದೆ
ನೂರಾರು ಅರ್ಥ ನನ್ನೆದೆಯ
ಭಾವದೊಳಗೆ ಆದರೆ,
ಅಲ್ಲಿ ನೀನಿಲ್ಲವೆಂಬ
ಅರಿವು ಎಚ್ಚರವಾದಾಗ
ಮತ್ತೆ ಅದೇ ಕತ್ತಲೆ ಇಷ್ಟವಾಗುತ್ತದೆ
ಆದರೂ ಪಣತೊಟ್ಟಿದ್ದೇನೆ
ಕತ್ತಲೆಯನ್ನೇ ಹಿಂಜಿ
ಬೆಳಕನ್ನು ಪಡೆಯಬೇಕೆಂದು
ಆ ಬೆಳಕಲ್ಲಿ ಹೊಸ ಲೋಕ,
ಭಾವ, ಭಾಷೆ ಕಲಿಯಬೇಕೆಂಬ
ಹಂಬಲ ನನ್ನದು.
ಭಾನುವಾರ, ಸೆಪ್ಟೆಂಬರ್ 28, 2008
ಗುರುವಾರ, ಸೆಪ್ಟೆಂಬರ್ 18, 2008
ಶನಿವಾರ, ಜುಲೈ 26, 2008
ಏನೋ ಆಗಿದೆ
ಭಾನುವಾರ, ಜುಲೈ 20, 2008
ಶನಿವಾರ, ಜುಲೈ 19, 2008
ನೋವು
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)
-
| ಮಲ್ಲಿಕಾರ್ಜುನ ತಿಪ್ಪಾರ, ಬೆಂಗಳೂರು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆಂಬ ಸುದ್ದಿ ಹೊರ ಬೀಳುತ್ತಿದ್...
-
ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾ ‘ ಜೈ ಭೀಮ್ ’ ಸದ್ದು ಮಾಡುತ್ತಿದೆ . ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ ಕೆ . ಚಂದ್ರು . ...
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...

